Ecclesiastes 7:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನನ್ನ ಜ್ಞಾನದಿಂದ ಇವೆಲ್ಲವುಗಳ ಕುರಿತಾಗಿ ಆಲೋಚಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಆದರೆ ಅದು ಅಸಾಧ್ಯವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು. “ನಾನು ಜ್ಞಾನಿಯಾಗುವೆನು” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.
Kannada BSI Bible 2016
ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ; ಆಗ--ನಾನು ಜ್ಞಾನಿಯಾಗಿರುವೆನು ಎಂದು ಅಂದು ಕೊಂಡೆನು; ಅದು ನನ್ನಿಂದ ದೂರವಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನೆಲ್ಲಾ ಜ್ಞಾನದಿಂದ ಪರೀಕ್ಷಿಸಿದೆನು; ಜ್ಞಾನಿಯಾಗುವೆನು ಎಂದುಕೊಂಡೆನು; ಅದು ನನಗೆ ದೂರವಾಯಿತು.
Kannada Bible (KNCL) BSI 2016
ಇದನ್ನೆಲ್ಲ ಜ್ಞಾನದಿಂದ ಪರೀಕ್ಷಿಸಿದೆ, ಜ್ಞಾನಿಯಾಗುತ್ತೇನೆಂದು ನಿರ್ಧರಿಸಿಕೊಂಡೆ. ಆದರೆ ಅದು ನನಗೆ ದೂರವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದೆಲ್ಲವನ್ನು ನಾನು ಜ್ಞಾನದಿಂದ ಪರೀಕ್ಷಿಸಿದ್ದೇನೆ, “ನಾನು ಜ್ಞಾನಿಯಾಗಿರಲು ತೀರ್ಮಾನಿಸುತ್ತೇನೆ,” ಎಂದುಕೊಂಡೆನು. ಆದರೆ ಅದು ನನ್ನಿಂದ ದೂರವಾಯಿತು.