Ecclesiastes 7:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 27
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು, ಆದರೆ ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
Kannada BSI Bible 2016
ಅದನ್ನು ಇನ್ನೂ ನನ್ನ ಪ್ರಾಣವು ಹುಡುಕುತ್ತದೆ; ನನಗೆ ಸಿಕ್ಕಲಿಲ್ಲ; ಸಾವಿರದಲ್ಲಿ ಒಬ್ಬ ಪುರುಷನನ್ನು ನಾನು ಕಂಡುಕೊಂಡಿ ದ್ದೇನೆ; ಅವರೆಲ್ಲರಲ್ಲಿ ನಾನು ಒಬ್ಬ ಹೆಂಗಸನ್ನು ಕಂಡು ಕೊಳ್ಳಲಿಲ್ಲ.ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹಸ್ರ ಪುರುಷರಲ್ಲಿ ಯೋಗ್ಯನೊಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಸಹಸ್ರ ಸ್ತ್ರೀಯರಲ್ಲಿ ಯೋಗ್ಯಳೊಬ್ಬಳನ್ನೂ ಕಂಡಿಲ್ಲ.
Kannada Bible (KNCL) BSI 2016
ಸಹಸ್ರಪುರುಷರಲ್ಲಿ ಯೋಗ್ಯ ಎನ್ನ ತಕ್ಕ ಒಬ್ಬನನ್ನು ಕಂಡಿದ್ದರೂ ಕಂಡಿರಬಹುದು; ಮೇಲಾದ ಹೆಂಗಸು ಎನ್ನತಕ್ಕವಳು ಸಿಕ್ಕಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಹುಡುಕಿ ನೋಡಿದರೂ ನನಗೆ ಇದುವರೆಗೆ ಉತ್ತರ ಸಿಕ್ಕಲಿಲ್ಲ. ನಾನು ಸಾವಿರ ಪುರುಷರಲ್ಲಿ ಒಬ್ಬ ಸತ್ಯವಂತನನ್ನು ಕಂಡೆನು. ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ಸತ್ಯವಂತಳನ್ನು ಕಂಡುಕೊಳ್ಳಲಿಲ್ಲ.