Ecclesiastes 7:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು ಮತ್ತೊಂದು ವಿಷಯವನ್ನು ತಿಳಿದುಕೊಂಡೆನು. ಅದೇನೆಂದರೆ, ದೇವರು ಮನುಷ್ಯರನ್ನು ನೀತಿವಂತರನ್ನಾಗಿ ಸೃಷ್ಟಿಸಿದನು. ಆದರೆ ಜನರು ಕೆಟ್ಟವರಾಗಿರಲು ಅನೇಕ ದಾರಿಗಳನ್ನು ಕಂಡುಕೊಂಡರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಮನುಷ್ಯರನ್ನು ಸತ್ಯವಂತನನ್ನಾಗಿ ಸೃಷ್ಟಿಸಿದನು. ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ.
Kannada BSI Bible 2016
ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೋಡು, ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದನು, ಅವರಾದರೋ ಬಹು ಯುಕ್ತಿಗಳನ್ನು ಕಲ್ಪಿಸಿಕೊಂಡಿದ್ದಾರೆ; ಇದನ್ನು ಮಾತ್ರ ಕಂಡೆನು.
Kannada Bible (KNCL) BSI 2016
ಇದೊಂದು ನಿನಗೆ ತಿಳಿದಿರಲಿ: ದೇವರು ಮನುಷ್ಯರನ್ನು ಸಜ್ಜನರನ್ನಾಗಿ ಸೃಷ್ಟಿಸಿದರು; ಮನುಷ್ಯರಾದರೂ ಅನೇಕ ಸಮಸ್ಯೆಗಳನ್ನು ಕಲ್ಪಿಸಿಕೊಂಡಿದ್ದಾರೆ. ನನಗೆ ಕಂಡುಬಂದುದು ಇದುವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ: ದೇವರು ಮನುಷ್ಯರನ್ನು ಸತ್ಯವಂತರನ್ನಾಗಿ ಸೃಷ್ಟಿಸಿದರು. ಮನುಷ್ಯರಾದರೋ ಅನೇಕ ಸ್ವಾರ್ಥ ಯೋಜನೆಗಳನ್ನು ಮಾಡಿಕೊಂಡಿದ್ದಾರೆ.