Ecclesiastes 7:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೂಢರ ನಗು ಉಪಯೋಗವಿಲ್ಲದ್ದು. ಅದು ಮಡಕೆಯ ಕೆಳಗೆ ಚಟಪಟನೆ ಉರಿದುಹೋಗುವ ಮುಳ್ಳುಕಡ್ಡಿಯಂತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೂಢರ ನಗುವು ಮಡಿಕೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆಯೇ. ಇದೂ ಕೂಡ ವ್ಯರ್ಥ.
Kannada BSI Bible 2016
ಗಡಿಗೆಯ ಕೆಳಗೆ ಮುಳ್ಳುಗಳ ಚಟಚಟನೆಯ ಶಬ್ದ ಹೇಗೋ ಮೂಢನ ನಗುವು ಹಾಗೆಯೇ ಇರುವದು; ಇದೂ ಕೂಡ ವ್ಯರ್ಥವೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಢರ ನಗುವಾಟವು ಹಂಡೆಯ ಕೆಳಗೆ ಉರಿಯುವ ಮುಳ್ಳಿನ ಚಟಪಟ ಶಬ್ದದ ಹಾಗೆ. ಇದೂ ವ್ಯರ್ಥ.
Kannada Bible (KNCL) BSI 2016
ಮೂಢರ ನಗೆಚಾಟಿಕೆ, ಮಡಕೆಯಡಿ ಉರಿವ ಮುಳ್ಳುಕಡ್ಡಿಯ ಚಟಪಟ. ಇದೂ ಸಹ ನಿರರ್ಥಕ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಡಿಗೆಯ ಕೆಳಗೆ ಉರಿಯುವ ಮುಳ್ಳುಕಡ್ಡಿ ಚಟಚಟನೆಯ ಶಬ್ದ ಹೇಗೋ, ಮೂಢನ ನಗುವು ಹಾಗೆಯೇ ಇರುವುದು. ಇದು ಕೂಡ ವ್ಯರ್ಥವೇ.