Ecclesiastes 8:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೇ ನಡೆಯದಿರುವ ಕಾರಣ ಅಪರಾಧ ಮಾಡಬೇಕೆಂಬ ಯೋಚನೆಯು ಮನುಷ್ಯರ ಹೃದಯದಲ್ಲಿ ತುಂಬಿ ತುಳುಕುವುದು.
Kannada BSI Bible 2016
ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವದರಿಂದ ಮನುಷ್ಯಪುತ್ರರ ಹೃದ ಯವು ಅವರನ್ನು ಕೆಟ್ಟದ್ದನ್ನು ಮಾಡುವದರಲ್ಲಿಯೇ ತುಂಬಿಸುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪರಾಧಕ್ಕೆ ವಿಧಿಸಿದ ದಂಡನೆಯು ಕೂಡಲೆ ನಡೆಯದಿರುವ ಕಾರಣ ಅಪರಾಧಮಾಡಬೇಕೆಂಬ ಯೋಚನೆಯು ನರಜನ್ಮದವರ ಹೃದಯದಲ್ಲಿ ತುಂಬಿ ತುಳುಕುವದು.
Kannada Bible (KNCL) BSI 2016
ಕೆಟ್ಟದ್ದನ್ನು ಮಾಡಲು ನರಮಾನವರು ತುಂಬ ಆಸಕ್ತಿ ಉಳ್ಳವರಾಗಿದ್ದಾರೆ. ಕೇಡಿಗೆ ತಕ್ಕ ದಂಡನೆಯನ್ನು ಕೂಡಲೆ ವಿಧಿಸದಿರುವುದೇ ಇದಕ್ಕೆ ಕಾರಣ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.