Ecclesiastes 8:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
Kannada BSI Bible 2016
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ ದಿವಸಗಳನ್ನು ಹೆಚ್ಚಿಸಿದರೂ ದೇವರಿಗೆ ಭಯ ಪಟ್ಟು ಆತನಲ್ಲಿ ಭಯಪಡುವವರಿಗೆ ಒಳ್ಳೇದಾಗುವ ದೆಂದು ನಾನು ನಿಶ್ಚಯವಾಗಿಯೂ ಬಲ್ಲೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.
Kannada Bible (KNCL) BSI 2016
ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.