Ecclesiastes 8:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನನ್ನ ಹೃದಯದಲ್ಲಿ ಜ್ಞಾನವನ್ನು ಪಡೆಯಲು, ಲೋಕದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ, ನಾನು ಕಂಡುಕೊಂಡ ಸಂಗತಿಯೇನೆಂದರೆ, “ಒಬ್ಬನು ರಾತ್ರಿಹಗಲು ಕಣ್ಣುಗಳಿಗೆ ನಿದ್ರೆಕೊಡದೆ ಕೆಲಸ ಮಾಡಿದರೂ,
Kannada BSI Bible 2016
ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾತ್ರಿ ಹಗಲು ಮನುಷ್ಯರ ಕಣ್ಣುಗಳಿಗೆ ನಿದ್ರೆ ಹತ್ತಗೊಡದ ಲೋಕದ ಶ್ರಮೆಯನ್ನು ನೋಡಲೂ ಜ್ಞಾನವನ್ನು ಪಡೆಯಲೂ ನಾನು ಮನಸ್ಸಿಟ್ಟಾಗ
Kannada Bible (KNCL) BSI 2016
ನಾನು ಜ್ಞಾನವನ್ನು ಪಡೆಯಲು, ಜಗದಲ್ಲಿ ನಡೆಯುವುದನ್ನು ಅರಿತುಕೊಳ್ಳಲು ಪ್ರಯತ್ನಿಸಿದಾಗ ಇದು ನನಗೆ ಮನದಟ್ಟಾಯಿತು: ಒಬ್ಬನು ರಾತ್ರಿ ಹಗಲು, ಕಣ್ಣುಗಳಿಗೆ ನಿದ್ರೆ ಹಚ್ಚಗೊಡದೆ ಪರಿಶೀಲಿಸಿದರೂ ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಲು ಆಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನವನ್ನು ತಿಳಿದುಕೊಳ್ಳುವುದಕ್ಕೂ ಭೂಮಿಯ ಮೇಲೆ ಮಾಡುವ ಪರಿಶ್ರಮವನ್ನು ನೋಡುವುದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು. ಜನರು ರಾತ್ರಿ ಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ಹಚ್ಚಗೊಡದವರೂ ಇದ್ದಾರೆ.