Ecclesiastes 8:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಎಲ್ಲಾ ಕಾರ್ಯಗಳನ್ನೂ ಮತ್ತು ಲೋಕದಲ್ಲಿ ಮಾಡುವ ಕೆಲಸಗಳನ್ನೂ ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಪ್ರಯಾಸಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಅದನ್ನು ಗ್ರಹಿಸಿಕೊಳ್ಳಲು ಯೋಚಿಸಿದರೂ ಅವನು ಅದನ್ನು ಗ್ರಹಿಸಲಾರನು.”
Kannada BSI Bible 2016
ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದಲ್ಲಿ ನಡೆಯುವದನ್ನು ಮನುಷ್ಯನು ಗ್ರಹಿಸಲಾರನು, ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಗ್ರಹಿಸಲಾರನು; ಹೌದು, ಜ್ಞಾನಿಯು ಗ್ರಹಿಸಬಹುದೆಂದರೂ ಗ್ರಹಿಸಲಾರನು ಎಂಬದಾಗಿ ನಾನು ದೇವರ ಕೆಲಸವನ್ನೆಲ್ಲಾ ದೃಷ್ಟಿಸಿ ತಿಳಿದುಕೊಂಡೆನು.
Kannada Bible (KNCL) BSI 2016
ಎಷ್ಟು ಪ್ರಯಾಸಪಟ್ಟು ವಿಚಾರಿಸಿದರೂ ಅವನಿಂದ ಸಾಧ್ಯವಾಗದು. ಹೌದು, ಜ್ಞಾನಿ ತನ್ನಿಂದಾಗುತ್ತದೆ ಎಂದು ಹೇಳಿಕೊಳ್ಳಬಹುದು; ಆದರೆ ಅವನಿಂದಲೂ ಅದು ಸಾಧ್ಯವಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ದೇವರ ಮಾಡುವ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು. ಅದೇನೆಂದರೆ, ಸೂರ್ಯನ ಕೆಳಗೆ ಮಾಡುವ ದೇವರ ಕೆಲಸಗಳನ್ನು ಮನುಷ್ಯನು ಗ್ರಹಿಸಲಾರನು. ಮನುಷ್ಯನು ಅದನ್ನು ಹುಡುಕುವುದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡುಕೊಳ್ಳಲಾರನು. ಹೌದು, ಜ್ಞಾನಿಯು ಸಹ ದೇವರು ಮಾಡುವುದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.