Ecclesiastes 8:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಾಜನಿಗೆ ನಿಮ್ಮ ಆಲೋಚನೆಗಳನ್ನು ತಿಳಿಸಲು ಭಯಪಡಬಾರದು; ನೀವು ಯಾವ ತಪ್ಪಿಗೂ ಬೆಂಬಲ ಕೊಡಬಾರದು. ಆದರೆ ರಾಜನು ತನಗೆ ಇಷ್ಟಬಂದಂತೆ ಆಜ್ಞೆಗಳನ್ನು ಕೊಡುತ್ತಾನೆಂಬುದು ಜ್ಞಾಪಕದಲ್ಲಿರಲಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು.
Kannada BSI Bible 2016
ಅವನ ದೃಷ್ಟಿಯಿಂದ ಹೊರಗೆ ಹೋಗುವದಕ್ಕೆ ಆತುರಪಡಬೇಡಿರಿ; ಕೆಟ್ಟ ಕಾರ್ಯದಲ್ಲಿ ನಿಲ್ಲಬೇಡಿರಿ; ಅವನು ತನಗೆ ಇಷ್ಟ ಬಂದದ್ದನ್ನೆಲ್ಲಾ ಮಾಡುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ರಾಜಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ; ದ್ರೋಹಕ್ಕೆ ಸೇರದಿರು; ಅವನು ಇಷ್ಟಬಂದಂತೆ ಮಾಡಬಲ್ಲನಲ್ಲವೆ.
Kannada Bible (KNCL) BSI 2016
ದುಡುಕುತನದಿಂದ ಅರಸನಿಗೆ ಬೆನ್ನು ತೋರಿಸಬೇಡ; ಕೆಟ್ಟ ವಿಷಯದಲ್ಲಿ ಹಟಮಾಡಬೇಡ. ಆತನು ತನಗಿಷ್ಟಬಂದಂತೆ ಮಾಡಬಲ್ಲನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅರಸನನ್ನು ಬಿಟ್ಟುಹೋಗುವುದಕ್ಕೆ ಆತುರ ಪಡಬೇಡಿರಿ. ಅರಸನು ತನಗೆ ಇಷ್ಟಬಂದದ್ದನ್ನೆಲ್ಲಾ ಮಾಡುತ್ತಾನೆ. ನೀವು ಕೆಟ್ಟ ಕಾರ್ಯಕ್ಕಾಗಿ ನಿಲ್ಲಬೇಡಿರಿ.