Ecclesiastes 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
Kannada BSI Bible 2016
ಪ್ರತಿಯೊಂದು ಕಾರ್ಯಕ್ಕೂ ಕಾಲ ಮತ್ತು ನ್ಯಾಯಗಳಿವೆ, ಆದದರಿಂದ ಮನುಷ್ಯನ ಕಷ್ಟವು ಅವನ ಮೇಲೆ ದೊಡ್ಡದಾಗಿ ಘೋರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಂದು ಕಾರ್ಯಕ್ಕೆ ಕಾಲವೂ ನ್ಯಾಯತೀರ್ಪೂ ಇರುವವಲ್ಲವೆ; ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.
Kannada Bible (KNCL) BSI 2016
ಪ್ರತಿಯೊಂದು ಕಾರ್ಯಕ್ಕೆ ಒಂದು ಕಾಲ, ಒಂದು ಕ್ರಮ ಇರುತ್ತದೆಯಲ್ಲವೆ? ಮನುಷ್ಯನು ಎದುರಿಸಬೇಕಾದ ಕಷ್ಟಕಾರ್ಪಣ್ಯಗಳು ಘನತರವಾದುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯನಿಗೆ ಕಷ್ಟಸಂಕಟವು ಭಾರವಾಗಿದ್ದರೂ ಪ್ರತಿಯೊಂದು ಕಾರ್ಯಕ್ಕೂ ಸರಿಯಾದ ಕಾಲ ಮತ್ತು ಕ್ರಮ ಇರುತ್ತದೆ.