Ecclesiastes 8:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟು ಹೋಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ, ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ. ಯುದ್ಧ ಕಾಲದಲ್ಲಿ ಹೇಗೆ ವಿರಾಮ ದೊರೆಯುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತನದಿಂದ ಬಿಡುಗಡೆಯೇ ಇಲ್ಲ.
Kannada BSI Bible 2016
ಆತ್ಮವನ್ನು ಹಿಡಿ ಯುವ ಶಕ್ತಿ ಯಾವ ಮನುಷ್ಯನಿಗೂ ಇಲ್ಲ; ಹಾಗೆಯೇ ಮರಣ ದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇರುವದಿಲ್ಲ. ಯುದ್ಧದಿಂದ ಬಿಡುಗಡೆಯೂ ಹೇಗೆ ಇಲ್ಲವೋ ಹಾಗೆಯೇ ದುಷ್ಟನಿಗೆ ಅದರಿಂದ ಬಿಡು ಗಡೆಯೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯನ್ನು ತಡೆಯುವ ಶಕ್ತಿಯು ಹೇಗೆ ಯಾರಿಗೂ ಇಲ್ಲವೋ ಹಾಗೆ ತಮ್ಮ ಮರಣದಿನವನ್ನು ತಡೆಯುವ ಶಕ್ತಿಯು ಯಾರಿಗೂ ಇಲ್ಲ; ಯುದ್ಧಕಾಲದಲ್ಲಿ ಹೇಗೆ ವಿರಾಮ ದೊರೆಯುವದಿಲ್ಲವೋ ಹಾಗೆ ಅಧರ್ಮಕ್ಕೊಳಪಟ್ಟವನಿಗೆ ಬಿಡುಗಡೆಯಿಲ್ಲ.
Kannada Bible (KNCL) BSI 2016
ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ತಮ್ಮ ಮರಣ ದಿನವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಸಾವೆಂಬ ಸಮರಕ್ಕೆ ವಿರಾಮವಿಲ್ಲ; ಅಂತೆಯೇ ದುಷ್ಟತನದ ಮೂಲಕ ಅದರಿಂದ ತಪ್ಪಿಸಿಕೊಳ್ಳಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಆತ್ಮವನ್ನು ತಡೆಯುವ ಶಕ್ತಿ ಯಾರಿಗೂ ಇಲ್ಲ. ಹಾಗೆಯೇ ಸಾಯುವ ಸಮಯವನ್ನು ತಡೆಯುವ ಶಕ್ತಿಯು ಸಹ ಯಾರಿಗೂ ಇಲ್ಲ. ಯುದ್ಧ ಸಮಯದಲ್ಲಿ ಹೇಗೆ ವಿರಾಮ ಇರುವುದಿಲ್ಲವೋ, ಹಾಗೆಯೇ ದುಷ್ಟನಿಗೆ ದುಷ್ಟತ್ವದಿಂದ ಬಿಡುಗಡೆಯೇ ಇಲ್ಲ.