Ecclesiastes 9:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
Kannada BSI Bible 2016
ನಾನು ಇವೆಲ್ಲವುಗಳ ಮೇಲೆ ಮನಸ್ಸಿಟ್ಟು ಇವೆಲ್ಲವುಗಳಲ್ಲಿ ನಾನು ತೀರ್ಮಾನಿಸಿ ದ್ದೇನಂದರೆ--ನೀತಿವಂತನು ಮತ್ತು ಜ್ಞಾನಿ ಇವರ ಕೆಲಸಗಳು ದೇವರ ಕೈಯಲ್ಲಿವೆ; ಯಾವ ಮನುಷ್ಯನೂ ಅವರ ಮುಂದಿರುವ ಎಲ್ಲವುಗಳನ್ನು, ಅಂದರೆ ಪ್ರೀತಿ ಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು.
Kannada Bible (KNCL) BSI 2016
ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ.