Ecclesiastes 9:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದಲ್ಲದೆ ಲೋಕದಲ್ಲಿ ಇನ್ನೂ ಕೆಲವು ಅನ್ಯಾಯಗಳನ್ನು ಗಮನಿಸಿದ್ದೇನೆ. ಅತಿವೇಗದ ಓಟಗಾರನಿಗೆ ಓಟದಲ್ಲಿ ಯಾವಾಗಲೂ ಗೆಲುವಾಗದು; ಬಲಿಷ್ಠವಾದ ಸೈನ್ಯಕ್ಕೆ ಯುದ್ಧದಲ್ಲಿ ಯಾವಾಗಲೂ ಜಯವಾಗದು; ಜ್ಞಾನಿಗೆ ಯಾವಾಗಲೂ ಆಹಾರ ದೊರಕದು; ಜಾಣನಿಗೆ ಯಾವಾಗಲೂ ಐಶ್ವರ್ಯ ದೊರೆಯದು; ಪ್ರವೀಣರಿಗೆ ಯಾವಾಗಲೂ ಹೊಗಳಿಕೆಬಾರದು; ಸಮಯ ಬಂದಾಗ, ಪ್ರತಿಯೊಬ್ಬರಿಗೂ ಕೇಡುಗಳಾಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.
Kannada BSI Bible 2016
ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನೋಡಿದ್ದೇನಂದರೆ, ವೇಗಿಗಳಿಗೆ ಓಟವೂ ಪರಾಕ್ರಮ ಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ರೊಟ್ಟಿಯೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವದಿಲ್ಲ. ಕಾಲವೂ ಗತಿಯೂ ಅವರೆಲ್ಲರಿಗೆ ಸಂಭವಿ ಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.
Kannada Bible (KNCL) BSI 2016
ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮತ್ತೆ ಸೂರ್ಯನ ಕೆಳಗೆ ನೋಡಿದ್ದೇನೆಂದರೆ, ವೇಗಿಗಳಿಗೆ ಓಟವೂ ಪರಾಕ್ರಮಶಾಲಿಗಳಿಗೆ ಯುದ್ಧವೂ ಜ್ಞಾನಿಗಳಿಗೆ ಆಹಾರವೂ ವಿವೇಕಿಗಳಿಗೆ ಐಶ್ವರ್ಯವೂ ಪ್ರವೀಣರಿಗೆ ದಯೆಯೂ ಸಿಗುವುದು ಎಂಬ ನಿಶ್ಚಯ ಇಲ್ಲ. ಏಕೆಂದರೆ ಕಾಲವೂ ಅವಕಾಶವೂ ಅವರೆಲ್ಲರಿಗೆ ಒಳಪಟ್ಟಿರುತ್ತವೆ.