Ecclesiastes 9:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಲವು ಜನರಿದ್ದ ಒಂದು ಚಿಕ್ಕ ನಗರವಿತ್ತು. ಒಬ್ಬ ದೊಡ್ಡ ರಾಜನು ಆ ನಗರದ ಮೇಲೆ ದಂಡೆತ್ತಿ ಬಂದು ಮುತ್ತಿಗೆ ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
Kannada BSI Bible 2016
ಅಲ್ಲಿ ಒಂದು ಸಣ್ಣ ನಗರವಿತ್ತು; ಅದರಲ್ಲಿ ಕೆಲವು ಮನುಷ್ಯರಿದ್ದರು; ಆಗ ಅಲ್ಲಿಗೆ ಒಬ್ಬ ಮಹಾಅರಸನು ಬಂದು ಅದನ್ನು ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಒಂದು ಚಿಕ್ಕ ಪಟ್ಟಣ, ಅದರಲ್ಲಿ ಕೊಂಚ ಜನರೇ ಇದ್ದರು; ಒಬ್ಬ ದೊಡ್ಡ ಅರಸು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
Kannada Bible (KNCL) BSI 2016
ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಕೆಲವೇ ನಿವಾಸಿಗಳು. ಬಲಿಷ್ಠವಾದ ಅರಸ ಅದಕ್ಕೆ ಮುತ್ತಿಗೆಹಾಕಿದ. ಅದರ ಸುತ್ತಲು ದೊಡ್ಡ ಕೋಟೆ ಎಬ್ಬಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.