Ecclesiastes 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಹೇಳುವುದೇನೆಂದರೆ, ಜ್ಞಾನವು ಶಕ್ತಿಗಿಂತಲೂ ಉತ್ತಮ. ಅವರು ಆ ಬಡವನ ಜ್ಞಾನವನ್ನು ಮರೆತುಬಿಟ್ಟರೂ ಅವನ ಮಾತುಗಳನ್ನು ಕೇಳದಿದ್ದರೂ ಜ್ಞಾನವು ಉತ್ತಮವಾದದ್ದೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇದನ್ನು ನೋಡಿ ಬಲಕ್ಕಿಂತ ಜ್ಞಾನವೇ ಶ್ರೇಷ್ಠ, ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರ ಮಾಡಿ ಅವನ ಮಾತುಗಳನ್ನು ಗಮನಿಸುವುದಿಲ್ಲ ಅಂದುಕೊಂಡೆನು.
Kannada BSI Bible 2016
ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.
Kannada Bible (KNCL) BSI 2016
ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ನೋಡಿ ನಾನು, “ಬಲಕ್ಕಿಂತ ಜ್ಞಾನವು ಉತ್ತಮ; ಆದರೆ ಜನರು ಬಡವನ ಜ್ಞಾನವನ್ನು ತಿರಸ್ಕಾರ ಮಾಡುತ್ತಾರೆ, ಅವನ ಮಾತುಗಳನ್ನು ಯಾರೂ ಲಕ್ಷಿಸುವುದಿಲ್ಲ,” ಎಂದುಕೊಂಡೆನು.