Ecclesiastes 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.
Kannada BSI Bible 2016
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.
Kannada Bible (KNCL) BSI 2016
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.