Ephesians 1:10 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಲವು ಪರಿಪೂರ್ಣವಾದಾಗ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದುಗೂಡಿಸಿ ಆತನಿಗೆ ಅಧೀನ ಪಡಿಸಬೇಕೆಂಬುದೇ ದೇವರ ಯೋಜನೆಯಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಲವು ಪರಿಪೂರ್ಣವಾದಾಗ, ಆತನು ಭೂಪರಲೋಕಗಳಲ್ಲಿರುವ ಸಮಸ್ತವನ್ನು ಕ್ರಿಸ್ತನಲ್ಲಿ ಒಂದುಗೂಡಿಸುವುದೇ ಆ ಸಂಕಲ್ಪವಾಗಿತ್ತು.
Kannada BSI Bible 2016
ಅದೇನಂದರೆ ಕಾಲವು ಪರಿಪೂರ್ಣವಾದ ಯುಗದಲ್ಲಿ ಆತನು ಪರಲೋಕದಲ್ಲಿರುವವುಗಳನ್ನೂ ಭೂ ಲೋಕದಲ್ಲಿರುವವುಗಳನ್ನೂ ಆತನಲ್ಲಿ ಅಂದರೆ ಕ್ರಿಸ್ತನಲ್ಲಿ ಎಲ್ಲವನ್ನು ಒಂದುಗೂಡಿಸಬೇಕೆಂದಿದ್ದನು.
Kannada Bible (KNCL) BSI 2016
ಕಾಲವು ಸಂಪೂರ್ಣಗೊಂಡಾಗ ಇಹಪರಗಳಲ್ಲಿರುವ ಸಮಸ್ತವನ್ನು ಕ್ರಿಸ್ತಯೇಸುವಿನಲ್ಲಿ ಒಂದುಗೂಡಿಸುವುದೇ ಈ ಯೋಜನೆಯ ಇಂಗಿತ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ರಹಸ್ಯವೋ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕಾಲವು ಪರಿಪೂರ್ಣಗೊಂಡಾಗ ಕ್ರಿಸ್ತನಲ್ಲಿ ಒಂದುಗೂಡಿಸುವುದಾಗಿದೆ.