Ephesians 1:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ನಿಮಗೂ ಅನ್ವಯಿಸುತ್ತದೆ. ನೀವು ಸತ್ಯ ಬೋಧನೆಯ ಬಗ್ಗೆ ಅಂದರೆ ನಿಮ್ಮ ರಕ್ಷಣೆಯ ಕುರಿತಾದ ಸುವಾರ್ತೆಯ ಬಗ್ಗೆ ಕೇಳಿದಾಗ ಕ್ರಿಸ್ತನಲ್ಲಿ ನಂಬಿಕೆಯಿಟ್ಟಿರಿ. ದೇವರು ತನ್ನ ವಾಗ್ದಾನಕ್ಕನುಸಾರವಾಗಿ ನಿಮಗೆ ಪವಿತ್ರಾತ್ಮನನ್ನು ದಯಪಾಲಿಸುವುದರ ಮೂಲಕ ನಿಮ್ಮ ಮೇಲೆ ತನ್ನ ವಿಶೇಷವಾದ ಮುದ್ರೆಯನ್ನು ಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಸಹ ನಿಮ್ಮ ರಕ್ಷಣಾ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿ, ಕ್ರಿಸ್ತನಲ್ಲಿ ನಂಬಿಕೆಯಿಟ್ಟು, ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನಿಂದ ಮುದ್ರೆಯನ್ನು ಹೊಂದಿದ್ದೀರಿ.
Kannada BSI Bible 2016
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
Kannada Bible (KNCL) BSI 2016
ನೀವು ಸಹ ಸತ್ಯವಾಕ್ಯವನ್ನು ಅಂದರೆ, ನಿಮಗೆ ಜೀವೋದ್ಧಾರವನ್ನೀಯುವ ಶುಭಸಂದೇಶವನ್ನು ಕೇಳಿ ಯೇಸುಕ್ರಿಸ್ತರಲ್ಲಿ ವಿಶ್ವಾಸ ಇಟ್ಟಿರಿ. ದೇವರು ವಾಗ್ದಾನಮಾಡಿದ ಪವಿತ್ರಾತ್ಮ ಅವರಿಂದ ಮುದ್ರಿತರಾದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಸಹ ನಿಮ್ಮ ರಕ್ಷಣೆಯ ಸುವಾರ್ತೆಯ ಸತ್ಯವಾಕ್ಯವನ್ನು ಕೇಳಿದ ಮೇಲೆ ಕ್ರಿಸ್ತನಲ್ಲಿ ನಂಬಿಕೆಯಿಟ್ಟು ವಾಗ್ದಾನದ ಪವಿತ್ರಾತ್ಮರಿಂದ ಮುದ್ರೆಹೊಂದಿದ್ದೀರಿ.