Ephesians 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣವೇ ನನ್ನ ಪ್ರಾರ್ಥನೆಗಳಲ್ಲಿ ನಾನು ನಿಮ್ಮನ್ನು ಜ್ಞಾಪಿಸಿಕೊಂಡು ನಿಮ್ಮ ವಿಷಯದಲ್ಲಿ ದೇವರಿಗೆ ಯಾವಾಗಲೂ ಸ್ತೋತ್ರ ಸಲ್ಲಿಸುತ್ತೇನೆ. ಪ್ರಭುವಾದ ಯೇಸುವಿನಲ್ಲಿ ನಿಮಗಿರುವ ನಂಬಿಕೆಯ ಬಗ್ಗೆ ಮತ್ತು ಎಲ್ಲಾ ದೇವಜನರ ಮೇಲೆ ನಿಮಗಿರುವ ಪ್ರೀತಿಯ ಬಗ್ಗೆ ಕೇಳಿದಂದಿನಿಂದ ನಾನು ನಿಮ್ಮ ವಿಷಯದಲ್ಲಿ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ. (Verses 15-16)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಮತ್ತು ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯ ವಿಷಯವನ್ನು ಕೇಳಿ,
Kannada BSI Bible 2016
ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.
Kannada Bible (KNCL) BSI 2016
ಪ್ರಭು ಯೇಸುವಿನಲ್ಲಿ ನೀವಿಟ್ಟಿರುವ ವಿಶ್ವಾಸ ಹಾಗೂ ದೇವಜನರೆಲ್ಲರ ಮೇಲೆ ನಿಮಗಿರುವ ಪ್ರೀತಿಯನ್ನು ಕುರಿತು ಕೇಳಿದ್ದೇನೆ. ಅಂದಿನಿಂದ ನಿಮ್ಮ ಸಲುವಾಗಿ ದೇವರಿಗೆ ಸದಾ ಕೃತಜ್ಞತಾಸ್ತುತಿ ಸಲ್ಲಿಸಿ, ನನ್ನ ಪ್ರಾರ್ಥನೆಯಲ್ಲಿ ನಿಮ್ಮನ್ನು ಸ್ಮರಿಸಿಕೊಳ್ಳುತ್ತಿದ್ದೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದ ನಾನು ಸಹ ಕರ್ತ ಯೇಸುವಿನಲ್ಲಿರುವ ನಿಮ್ಮ ನಂಬಿಕೆ ಹಾಗೂ ಪರಿಶುದ್ಧರೆಲ್ಲರಿಗಾಗಿರುವ ಪ್ರೀತಿಯನ್ನು ಕುರಿತು ಕೇಳಿ,