Ephesians 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಮಹಿಮಾಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ಪೂರ್ಣವಾದ ತಿಳಿವಳಿಕೆಯನ್ನು ಕೊಟ್ಟು, ಜ್ಞಾನ ಮತ್ತು ಪ್ರಕಟಣೆಗಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
Kannada Bible (KNCL) BSI 2016
ನಮ್ಮ ಪ್ರಭು ಯೇಸುಕ್ರಿಸ್ತರ ದೇವರೂ ಮಹಿಮಾನ್ವಿತ ತಂದೆಯೂ ಆದವರು, ನಿಮಗೆ ಜ್ಞಾನವನ್ನೂ ವಿವೇಚನೆಯನ್ನೂ ನೀಡುವ ಆತ್ಮವನ್ನು ದಯಪಾಲಿಸಲಿ; ತಮ್ಮನ್ನು ಸಂಪೂರ್ಣವಾಗಿ ಅರಿತುಕೊಳ್ಳುವ ವರವನ್ನು ಈಯಲಿ, ಎಂದು ಪ್ರಾರ್ಥಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಕರ್ತ ಯೇಸುಕ್ರಿಸ್ತರ ದೇವರೂ ಮಹಿಮೆಯ ತಂದೆಯಾದವರನ್ನು ನೀವು ಪೂರ್ಣವಾಗಿ ತಿಳಿದುಕೊಳ್ಳುವಂತೆ ಜ್ಞಾನದ ಮತ್ತು ಪ್ರಕಟಣೆಯ ಆತ್ಮವನ್ನು ನಿಮಗೆ ಅನುಗ್ರಹಿಸಲಿ ಎಂದು ನಿಮಗಾಗಿ ಯಾವಾಗಲೂ ಪ್ರಾರ್ಥನೆ ಮಾಡುವವನಾಗಿದ್ದೇನೆ.