Ephesians 1:21 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಕ್ರಿಸ್ತನನ್ನು ಎಲ್ಲಾ ಅಧಿಪತಿಗಳಿಗಿಂತಲೂ ಅಧಿಕಾರಿಗಳಿಗಿಂತಲೂ ಶಕ್ತಿಗಳಿಗಿಂತಲೂ ರಾಜರುಗಳಿಗಿಂತಲೂ ಪ್ರಮುಖನನ್ನಾಗಿ ಮಾಡಿದನು. ಈ ಲೋಕದಲ್ಲಾಗಲಿ ಮುಂದಿನ ಲೋಕದಲ್ಲಾಗಲಿ ಕೊಡಲ್ಪಟ್ಟಿರುವ ಯಾವುದೇ ಹೆಸರುಳ್ಳವರಿಗಿಂತಲೂ ಕ್ರಿಸ್ತನು ಪ್ರಮುಖನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.
Kannada BSI Bible 2016
ಸಕಲ ರಾಜತ್ವ ಅಧಿಕಾರ ಮಹತ್ವ ಪ್ರಭುತ್ವಾಧಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೊಕದೊಳಗೆ ತನ್ನ ಸ್ವಂತ ಬಲಪಾರ್ಶ್ವದಲ್ಲಿ ಆತನನ್ನು ಕೂಡ್ರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಕಲ ರಾಜತ್ವ, ಅಧಿಕಾರ, ಶಕ್ತಿ, ಪ್ರಭುತ್ವಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿಯೂ ಸಹ, ಹೆಸರುಗೊಂಡವರೆಲ್ಲರ ಮೇಲೆಯೂ ಎಷ್ಟೋ ಹೆಚ್ಚಾಗಿ ಪರಲೋಕದಲ್ಲಿ ಕ್ರಿಸ್ತರನ್ನು ತಮ್ಮ ಬಲಗಡೆಯಲ್ಲಿ ಕೂರಿಸಿಕೊಂಡರು.