Ephesians 1:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ. ಪರಲೋಕದಲ್ಲಿರುವ ಪ್ರತಿಯೊಂದು ಆಶೀರ್ವಾದಗಳನ್ನು ದೇವರು ನಮಗೆ ಕ್ರಿಸ್ತನಲ್ಲಿ ದಯಪಾಲಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.
Kannada Bible (KNCL) BSI 2016
ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ದೇವರೂ ತಂದೆಯೂ ಆಗಿರುವವರಿಗೆ ಸ್ತೋತ್ರ, ದೇವರು ಕ್ರಿಸ್ತನಲ್ಲಿ ಪರಲೋಕದ ಎಲ್ಲಾ ಆತ್ಮಿಕ ಆಶೀರ್ವಾದಗಳಿಂದ ನಮ್ಮನ್ನು ಆಶೀರ್ವದಿಸಿದ್ದಾರೆ.