Ephesians 1:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡನು. ತನ್ನ ಸನ್ನಿಧಿಯಲ್ಲಿ ನಾವು ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂಬುದು ಆತನ ಉದ್ದೇಶವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.
Kannada BSI Bible 2016
ನಾವು ಪ್ರೀತಿಯಲ್ಲಿದ್ದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಆತನು ಜಗತ್ತಿಗೆ ಅಸ್ತಿವಾರ ಹಾಕುವದಕ್ಕಿಂತ ಮುಂಚೆ ನಮ್ಮನು ಕ್ರಿಸ್ತನಲ್ಲಿ) ಆರಿಸಿಕೊಂಡನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.
Kannada Bible (KNCL) BSI 2016
ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.