Ephesians 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮ ಮೇಲಿನ ಪ್ರೀತಿಯಿಂದ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತನ್ನ ಸ್ವಂತ ಮಕ್ಕಳನ್ನಾಗಿ ಮಾಡಿಕೊಳ್ಳಲು ಆತನು ಆಗಲೇ ನಿರ್ಧರಿಸಿದ್ದನು. ಅದು ಆತನ ಚಿತ್ತವಾಗಿತ್ತು ಮತ್ತು ಆತನಿಗೆ ಮೆಚ್ಚಿಕೆಕರವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತನ್ನ ದಯಾಪೂರ್ವಕವಾದ ಚಿತ್ತಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನ್ನ ಮಕ್ಕಳನ್ನಾಗಿ ಅಂಗೀಕರಿಸಲು ಪ್ರೀತಿಯಿಂದ ಮೊದಲೇ ಸಂಕಲ್ಪಮಾಡಿದ್ದನು.
Kannada BSI Bible 2016
ಆತನು ತನ್ನ ಚಿತ್ತದ ದಯಾ ಪೂರ್ವಕವಾದ ಆನಂದಕ್ಕನುಸಾರವಾಗಿ ಯೇಸು ಕ್ರಿಸ್ತನ ಮೂಲಕ ನಮ್ಮನ್ನು ತನಗೋಸ್ಕರ ದತ್ತುಪುತ್ರ ಸ್ವೀಕಾರ ಮಾಡುವಂತೆ ಮೊದಲೇ ಸಂಕಲ್ಪಿಸಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.
Kannada Bible (KNCL) BSI 2016
ನಮ್ಮ ಮೇಲಿನ ಪ್ರೀತಿಯಿಂದಾಗಿ ದೇವರು ಯೇಸುಕ್ರಿಸ್ತರ ಮೂಲಕ ನಮ್ಮನ್ನು ತಮ್ಮ ಮಕ್ಕಳನ್ನಾಗಿಸಿಕೊಳ್ಳಲು ಆಗಲೇ ನಿರ್ಧರಿಸಿದ್ದರು. ಇದು ಅವರ ಸಂಕಲ್ಪ ಹಾಗೂ ಚಿತ್ತವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಚಿತ್ತದ ಸಂತೋಷಕ್ಕನುಸಾರವಾಗಿ ಕ್ರಿಸ್ತ ಯೇಸುವಿನ ಮೂಲಕ ನಮ್ಮನ್ನು ತಮಗೋಸ್ಕರ ತಮ್ಮ ಪುತ್ರರಾಗಿ ಸ್ವೀಕಾರ ಮಾಡುವಂತೆ ಮೊದಲೇ ನೇಮಿಸಿದರು.