Ephesians 2:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
Kannada BSI Bible 2016
ಆದಕಾರಣ ಪೂರ್ವಕಾಲದಲ್ಲಿ ಶಾರೀರಿಕವಾಗಿ ಅನ್ಯಜನರಾಗಿದ್ದು ಶರೀರದಲ್ಲಿ ಕೈಗಳಿಂದ ಮಾಡಲ್ಪಟ ಸುನ್ನತಿಯಿದ್ದವರೆಂದು ಕರೆಯಲ್ಪಟ್ಟವರಿಂದ ಸುನ್ನತಿಯಿಲ್ಲ ದವರೆಂದು ನೀವು ಕರೆಯಲ್ಪಟ್ಟಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.
Kannada Bible (KNCL) BSI 2016
ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.