Ephesians 2:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
Kannada BSI Bible 2016
ಇದಲ್ಲದೆ ನೀವು ಆ ಕಾಲದಲ್ಲಿ ಕ್ರಿಸ್ತನಿಲ್ಲದವರು ಇಸ್ರಾಯೇಲಿನ ಬಾಧ್ಯತೆಯಲ್ಲಿ ಹಕ್ಕಿಲ್ಲದವರೂ ಪರಕೀಯರು ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಿಗೆ ಅನ್ಯರೂ ನಿರೀಕ್ಷೆ ಯಿಲ್ಲದವರೂ ಈ ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.
Kannada Bible (KNCL) BSI 2016
ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.