Ephesians 2:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಒಂದು ಕಾಲದಲ್ಲಿ ನೀವು ದೇವರಿಗೆ ಬಹು ದೂರವಾಗಿದ್ದಿರಿ. ಆದರೆ ಈಗ ನೀವು ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೇವರಿಗೆ ಸಮೀಪಸ್ಥರಾದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
Kannada BSI Bible 2016
ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ.
Kannada Bible (KNCL) BSI 2016
ಹೀಗೆ ಹಿಂದೊಮ್ಮೆ ದೇವರಿಂದ ದೂರವಾಗಿದ್ದ ನಿಮ್ಮನ್ನು ಕ್ರಿಸ್ತಯೇಸು ಸುರಿಸಿದ ರಕ್ತದ ಮೂಲಕ ದೇವರ ಹತ್ತಿರಕ್ಕೆ ತರಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೊದಲು ಕ್ರಿಸ್ತ ಯೇಸುವಿಗೆ ದೂರವಾಗಿದ್ದ ನೀವು ಈಗ ಕ್ರಿಸ್ತನ ರಕ್ತದ ಮೂಲಕ ಹತ್ತಿರವಾಗಿದ್ದೀರಿ.