Ephesians 2:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತನಿಂದ ಈಗ ನಮಗೆ ಸಮಾಧಾನ ದೊರೆತಿದೆ. ಕ್ರಿಸ್ತನು ಯೆಹೂದ್ಯರನ್ನೂ ಯೆಹೂದ್ಯರಲ್ಲದವರನ್ನೂ ಒಂದೇ ಜನಾಂಗವನ್ನಾಗಿ ಮಾಡಿದ್ದಾನೆ. ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ಮಧ್ಯೆ ಒಂದು ಅಡ್ಡಗೋಡೆಯಿದೆಯೋ ಎಂಬಂತೆ ಬೇರ್ಪಟ್ಟಿದ್ದರು. ಅವರು ಒಬ್ಬರನ್ನೊಬ್ಬರು ದ್ವೇಷಿಸಿದರು. ಆದರೆ ಕ್ರಿಸ್ತನು ತನ್ನ ದೇಹವನ್ನೇ ಅರ್ಪಿಸುವುದರ ಮೂಲಕ ದ್ವೇಷವೆಂಬ ಆ ಗೋಡೆಯನ್ನು ಕೆಡವಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.
Kannada BSI Bible 2016
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದವನಾದ ಆತನೇ ನಮಗೆ ಸಮಾಧಾನಕರ್ತೃವಾಗಿದ್ದಾನೆ. ಆತನು ತನ್ನ ಶರೀರವನ್ನು ಸಮರ್ಪಿಸಿದ್ದರಲ್ಲಿ ವಿಧಿರೂಪವಾದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ತೆಗೆದುಹಾಕಿ ಇದ್ದ ದ್ವೇಷವನ್ನು ಮುಗಿಸಿ ನಮ್ಮನ್ನು ಅಗಲಿಸಿದ ಅಡ್ಡಗೋಡೆಯನ್ನು ಕೆಡವಿಹಾಕಿದನು.
Kannada Bible (KNCL) BSI 2016
ಯೇಸುಕ್ರಿಸ್ತರೇ ನಮ್ಮ ಶಾಂತಿದಾತ. ನಿಮ್ಮನ್ನೂ ನಮ್ಮನ್ನೂ ಒಂದುಗೂಡಿಸಿದವರು ಅವರೇ. ನಮ್ಮೀರ್ವರನ್ನು ಪ್ರತ್ಯೇಕಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತಮ್ಮ ಶರೀರದಿಂದಲೇ ಕೆಡವಿಹಾಕಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸು ತಾವೇ ನಮ್ಮ ಸಮಾಧಾನವಾಗಿದ್ದು, ಎರಡು ಗುಂಪಿನವರನ್ನು ಒಂದು ಮಾಡಿ, ಅಗಲಿಸಿದ ವೈರತ್ವದ ಅಡ್ಡಗೋಡೆಯನ್ನು ತಮ್ಮ ಶರೀರದ ಮೂಲಕ ಕೆಡವಿಹಾಕಿದರು.