Ephesians 2:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.
Kannada BSI Bible 2016
ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;
Kannada Bible (KNCL) BSI 2016
ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.