Ephesians 2:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಎರಡು ಜನಾಂಗಗಳ ನಡುವೆ ಇದ್ದ ದ್ವೇಷವನ್ನು ಕ್ರಿಸ್ತನು ಶಿಲುಬೆಯ ಮೂಲಕ ಕೊನೆಗೊಳಿಸಿದನು. ಈ ಜನಾಂಗಗಳು ಒಂದೇ ದೇಹವಾದ ಬಳಿಕ ಅವರನ್ನು ದೇವರ ಬಳಿಗೆ ನಡೆಸಬೇಕೆಂಬುದು ಕ್ರಿಸ್ತನ ಬಯಕೆಯಾಗಿತ್ತು. ಶಿಲುಬೆಯ ಮೇಲೆ ಪ್ರಾಣಕೊಡುವುದರ ಮೂಲಕ ಕ್ರಿಸ್ತನು ತನ್ನ ಈ ಬಯಕೆಯನ್ನು ಪೂರೈಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.
Kannada BSI Bible 2016
ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನಪಡಿಸಿದ್ದಾನೆ.
Kannada Bible (KNCL) BSI 2016
ತಮ್ಮ ಶಿಲುಬೆಯ ಮರಣದ ಮೂಲಕ ಹಗೆತನವನ್ನು ನಿರ್ಮೂಲಗೊಳಿಸಿ ಉಭಯತ್ರರನ್ನು ಒಂದೇ ದೇಹದಂತೆ ಮಾಡಿ ದೇವರೊಂದಿಗೆ ಸಂಧಾನಗೊಳಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಶಿಲುಬೆಯ ಮರಣದ ಮೂಲಕ ಇವೆರಡೂ ಗುಂಪಿನವರಿಂದ ಒಂದೇ ದೇಹದವರನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿ, ಇದ್ದ ವೈರತ್ವವನ್ನು ಇಲ್ಲದಂತೆ ಮಾಡಿದರು.