Ephesians 2:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೆಹೂದ್ಯರಲ್ಲದವರಾದ ನೀವು ಈಗ ವಿದೇಶಿಯರಲ್ಲ ಮತ್ತು ಅನ್ಯಜನರಲ್ಲ. ಈಗ ನೀವು ದೇವರ ಪರಿಶುದ್ಧ ಜನರೊಂದಿಗೆ ಪ್ರಜೆಗಳಾಗಿದ್ದೀರಿ. ನೀವು ದೇವರ ಕುಟುಂಬಕ್ಕೆ ಸೇರಿದವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
Kannada BSI Bible 2016
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ಪರಿಶುದ್ಧರೊಂದಿಗೆ ಒಂದೇ ಪಟ್ಟಣದವರೂ ದೇವರ ಮನೆಯವರೂ ಆಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೆ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
Kannada Bible (KNCL) BSI 2016
ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶಿಗಳೂ ಆಗಿರದೆ, ದೇವಜನರೊಂದಿಗೆ ಸಹಜೀವಿಗಳು ಮತ್ತು ದೇವರ ಮನೆತನದವರು ಆಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲಾಗಿ, ನೀವು ಇನ್ನು ಮೇಲೆ ಪರಕೀಯರೂ ಪರದೇಶದವರೂ ಆಗಿರದೆ ದೇವಜನರೊಂದಿಗೆ ಜೊತೆ ನಾಗರಿಕರೂ ದೇವರ ಮನೆಯವರೂ ಆಗಿದ್ದೀರಿ.