Ephesians 2:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೌದು, ಮೊದಲು ನೀವು ಆ ಪಾಪಗಳನ್ನೇ ಮಾಡುತ್ತಿದ್ದಿರಿ. ಈ ಲೋಕದ ಮಾರ್ಗಗಳಿಗನುಸಾರವಾಗಿ ನೀವು ಜೀವಿಸಿದಿರಿ. ವಾಯುಮಂಡಲದಲ್ಲಿರುವ ದುಷ್ಟಶಕ್ತಿಗಳ ಅಧಿಪತಿಯನ್ನು ನೀವು ಅನುಸರಿಸಿದಿರಿ. ದೇವರಿಗೆ ಅವಿಧೇಯರಾದ ಜನರಲ್ಲಿ ಈಗ ಕಾರ್ಯಮಾಡುತ್ತಿರುವುದು ಅದೇ ಆತ್ಮ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
Kannada BSI Bible 2016
ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಪೂರ್ವದಲ್ಲಿ ಅಪರಾಧಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರನಡಿಸುವ ಅಧಿಪತಿಗೆ, ಅಂದರೆ ನಂಬಲೊಲ್ಲದವರನ್ನು ಅವಿಧೇಯತೆಗೆ ಈಗ ಪ್ರೇರೇಪಿಸುವ ಆತ್ಮನಿಗೆ ಅನುಸಾರವಾಗಿ ನಡೆದುಕೊಂಡಿರಿ.
Kannada Bible (KNCL) BSI 2016
ಆಗ ನೀವು ಲೋಕದ ರೀತಿನೀತಿಗಳನ್ನು ಅನುಸರಿಸಿ ಬಾಳಿದಿರಿ. ವಾಯುಮಂಡಲದಲ್ಲಿನ ಅಶರೀರ ಶಕ್ತಿಗಳ ಅಧಿಪತಿಗೆ ಅಧೀನರಾಗಿದ್ದಿರಿ. ದುಷ್ಕರ್ಮಿಗಳನ್ನು ಪ್ರಚೋದಿಸುತ್ತಲಿರುವ ದುರಾತ್ಮನಿಗೆ ವಿಧೇಯರಾಗಿದ್ದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು, ಹಿಂದೆ ಇಹಲೋಕದ ಮಾರ್ಗಕ್ಕೆ ಅನುಸಾರವಾಗಿ ನಡೆದುಕೊಂಡು, ವಾಯುಮಂಡಲದ ಅಧಿಪತಿಯ ಆತ್ಮನಿಗನುಸಾರವಾಗಿದ್ದೀರಿ. ಆ ದುರಾತ್ಮವು ಈಗ ಅವಿಧೇಯತೆಯ ಮಕ್ಕಳಲ್ಲಿ ಕಾರ್ಯಮಾಡುತ್ತಿದೆ.