Ephesians 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಡೀ ಕಟ್ಟಡವು ಕ್ರಿಸ್ತನಲ್ಲಿ ಒಂದಾಗಿ ಸೇರಿಕೊಂಡಿದೆ. ಕ್ರಿಸ್ತನೇ ಅದನ್ನು ಬೆಳೆಯಿಸಿ ಪ್ರಭುವಿನಲ್ಲಿ ಪರಿಶುದ್ಧವಾದ ದೇವಾಲಯವನ್ನಾಗಿ ಮಾಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ, ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
Kannada BSI Bible 2016
ಆತನಲ್ಲಿ ಕಟ್ಟಡವು ಹೊಂದಿಕೆ ಯಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ದ ದೇವಾ ಲಯವಾಗುತ್ತದೆ.ಆತನಲ್ಲಿ ನೀವು ಸಹ ಆತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವಂತೆ ಒಟ್ಟಾಗಿ ಕಟ್ಟಲ್ಪಡುತ್ತಾ ಇದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಕ್ರಿಸ್ತನೇ ಮುಖ್ಯವಾದ ಮೂಲೆಗಲ್ಲು; ಆತನಲ್ಲಿ ಕಟ್ಟಡದ ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ಕಟ್ಟಡವು ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.
Kannada Bible (KNCL) BSI 2016
ಇಡೀ ಕಟ್ಟಡವು ಅವರನ್ನೇ ಆಧರಿಸಿ, ಎಲ್ಲಾ ಭಾಗಗಳು ಒಂದಕ್ಕೊಂದು ಹೊಂದಿಕೆಯಾಗಿ ನಿಂತು, ಪ್ರಭುವಿಗೆ ಅರ್ಪಿತವಾದ ದೇವಮಂದಿರ ಆಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತನಲ್ಲಿ ಕಟ್ಟಡವೆಲ್ಲವೂ ಒಂದಾಗಿ ವೃದ್ಧಿಯಾಗುತ್ತಾ ಕರ್ತನಲ್ಲಿ ಪರಿಶುದ್ಧ ದೇವಾಲಯವಾಗುತ್ತದೆ.