Ephesians 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೊದಲು ನಾವೆಲ್ಲರೂ ಆ ಜನರಂತೆಯೇ ಜೀವಿಸುತ್ತಿದ್ದೆವು. ಶರೀರಭಾವದ ನಮ್ಮ ಇಚ್ಛೆಗಳನ್ನು ಪೂರೈಸಲು ನಾವು ಪ್ರಯತ್ನಿಸುತ್ತಿದ್ದೆವು. ನಮ್ಮ ದೇಹ, ಮನಸ್ಸುಗಳು ಬಯಸಿದ್ದನ್ನೆಲ್ಲಾ ನಾವು ಮಾಡಿದೆವು. ನಾವು ದುಷ್ಟಜನರಾಗಿದ್ದೆವು. ನಮ್ಮ ಆ ಜೀವಿತದ ದೆಸೆಯಿಂದ ನಾವು ಆಗಲೇ ದೇವರ ಕೋಪಕ್ಕೆ ಗುರಿಯಾಗಬೇಕಿತ್ತು. ನಮಗೂ ಇತರ ಜನರಿಗೂ ಯಾವ ವ್ಯತ್ಯಾಸವೂ ಇರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವೆಲ್ಲರೂ ಪೂರ್ವದಲ್ಲಿ ಅವರ ಹಾಗೆಯೇ ಇದ್ದೆವು, ಶರೀರಭಾವದ ಆಸೆಗಳಿಗೆ ಅಧೀನರಾಗಿ, ಶಾರೀರಿಕ ಹಾಗೂ ಮಾನಸಿಕ ಇಚ್ಛೆಗಳನ್ನು ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೇವರ ಕೋಪಕ್ಕೆ ಗುರಿಯಾಗಿದ್ದೆವು.
Kannada BSI Bible 2016
ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವೆಲ್ಲರೂ ಪೂರ್ವದಲ್ಲಿ ಅವಿಧೇಯರಾಗಿದ್ದು ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಫೆಗಳನ್ನು ನೆರವೇರಿಸುತ್ತಾ ನಡೆದು ವಿುಕ್ಕಾದವರಂತೆ ಸ್ವಭಾವಸಿದ್ಧವಾಗಿ ದೇವರ ಕೋಪಕ್ಕೆ ಗುರಿಯಾಗಿದ್ದೆವು.
Kannada Bible (KNCL) BSI 2016
ವಾಸ್ತವವಾಗಿ ಹಿಂದೊಮ್ಮೆ ನಾವೆಲ್ಲರು ಸಹ ಹಾಗೆಯೇ ಇದ್ದೆವು. ಶಾರೀರಿಕ ಆಶೆಆಮಿಷಗಳಿಗೆ ತುತ್ತಾಗಿದ್ದೆವು; ಮಾನಸಿಕ ಹಾಗೂ ಶಾರೀರಿಕ ದುರಿಚ್ಛೆಗಳನ್ನೇ ಈಡೇರಿಸುತ್ತಾ ಬಂದೆವು. ಸ್ವಭಾವತಃ ನಾವು ಸಹ ಇತರರಂತೆಯೇ ದೈವಕೋಪಕ್ಕೆ ಗುರಿಯಾಗಿದ್ದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಿಂದೊಮ್ಮೆ ನಾವೆಲ್ಲರೂ ಅವರೊಂದಿಗೆ ನಮ್ಮ ದೇಹದ ಆಶೆಗಳ ಪ್ರಕಾರ ಜೀವಿಸುತ್ತಿದ್ದಾಗ ಮನಸ್ಸಿನ ಹಾಗೂ ಶರೀರದ ಆಶೆಗಳನ್ನು ನೆರವೇರಿಸುತ್ತಾ ನಡೆದು, ಉಳಿದವರಂತೆ ಸ್ವಾಭಾವಿಕವಾಗಿ ದೇವರ ಕೋಪಕ್ಕೆ ಗುರಿಯಾದವರಾಗಿದ್ದೆವು.