Ephesians 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ದೇವರಿಗೆ ವಿರುದ್ಧವಾಗಿ ಮಾಡಿದ ಕಾರ್ಯಗಳ ದೆಸೆಯಿಂದ ಸತ್ತವರಾಗಿದ್ದೆವು. ಆದರೆ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ನೀವು ದೇವರ ಕೃಪೆಯಿಂದ ರಕ್ಷಣೆ ಹೊಂದಿದವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
Kannada BSI Bible 2016
ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.)
Kannada Bible (KNCL) BSI 2016
ನಮ್ಮ ಅಪರಾಧಗಳ ನಿಮಿತ್ತ ಆಧ್ಯಾತ್ಮಿಕವಾಗಿ ಮೃತರಾಗಿದ್ದ ನಮ್ಮನ್ನು ಕ್ರಿಸ್ತಯೇಸುವಿನೊಡನೆ ಜೀವಂತರನ್ನಾಗಿ ಮಾಡಿದರು. (ದೈವಾನುಗ್ರಹದಿಂದಲೇ ನೀವೀಗ ಜೀವೋದ್ಧಾರ ಹೊಂದಿದ್ದೀರಿ).
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೇಗೆದಂರೆ, ಅಪರಾಧಗಳಲ್ಲಿ ಸತ್ತವರಾಗಿದ್ದರೂ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದರು. ಹೀಗೆ ನೀವು ದೇವರ ಕೃಪೆಯಿಂದಲೇ ರಕ್ಷಣೆ ಹೊಂದಿದ್ದೀರಿ.