Ephesians 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನ ಮಹಾತಿಶಯವಾದ ಕೃಪೆಯನ್ನು ಮುಂದಿನ ಕಾಲದಲ್ಲೆಲ್ಲಾ ತೋರಿಸಬೇಕೆಂದು ಹೀಗೆ ಮಾಡಿದ್ದಾನೆ. ದೇವರು ಈ ಕೃಪೆಯನ್ನು ತನ್ನ ಕರುಣೆಯ ಮೂಲಕ ನಮಗೆ ಕ್ರಿಸ್ತ ಯೇಸುವಿನಲ್ಲಿ ತೋರಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.
Kannada BSI Bible 2016
ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ.
Kannada Bible (KNCL) BSI 2016
ದೇವರು ಯೇಸುಕ್ರಿಸ್ತರಲ್ಲಿ ನಮಗೆ ತೋರಿದ ದಯೆಯ ಮೂಲಕ ತಮ್ಮ ಅನುಗ್ರಹದ ಶ್ರೀಮಂತಿಕೆಯನ್ನು ಮುಂದಣ ಯುಗಗಳಲ್ಲಿ ತಿಳಿಯಪಡಿಸುವುದೇ ಅವರ ಉದ್ದೇಶವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂದಣ ಯುಗಗಳಲ್ಲಿ ಕ್ರಿಸ್ತ ಯೇಸುವಿನ ದಯೆಯ ಮೂಲಕ ದೇವರು ತಮ್ಮ ಮಿತಿಯಿಲ್ಲದ ಕೃಪೆಯನ್ನು ನಮಗೆ ತೋರಿಸಬೇಕೆಂದಿದ್ದಾರೆ.