Ephesians 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮಗೆ ರಕ್ಷಣೆ ದೊರೆತದ್ದು ನಿಮ್ಮ ಒಳ್ಳೆಯ ಕಾರ್ಯಗಳಿಂದಲ್ಲ. ಆದ್ದರಿಂದ ತನ್ನನ್ನು ತಾನೇ ರಕ್ಷಿಸಿಕೊಂಡಿರುವುದಾಗಿ ಯಾರೂ ಹೊಗಳಿಕೊಳ್ಳಲು ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
Kannada BSI Bible 2016
ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
Kannada Bible (KNCL) BSI 2016
ಇದು ಮಾನವರ ಪುಣ್ಯಕಾರ್ಯಗಳ ಪರಿಣಾಮವೂ ಅಲ್ಲ. ಆದುದರಿಂದ ಯಾರೂ ಹೆಮ್ಮೆಪಡಲು ಆಸ್ಪದವಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರಾದರೂ ಹೆಮ್ಮೆ ಪಡುವಂತೆ ಈ ರಕ್ಷಣೆಯು ಪುಣ್ಯಕ್ರಿಯೆಗಳಿಂದ ಉಂಟಾದದ್ದೂ ಅಲ್ಲ.