Ephesians 3:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
Kannada BSI Bible 2016
ನಾನಾ ವಿಧವಾದ ದೇವರ ಜ್ಞಾನವು ಪರಲೋಕದಲ್ಲಿ ಈಗ ರಾಜತ್ವಗಳಿಗೂ ಅಧಿಕಾರಗಳಿಗೂ ಸಭೆಯ ಮೂಲಕ ಗೊತ್ತಾಗಬೇಕೆಂಬದಾಗಿಯೂ ಆತನು ಉದ್ದೇಶಿಸಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.
Kannada Bible (KNCL) BSI 2016
ಹೀಗೆ ಧರ್ಮಸಭೆಯ ಮೂಲಕ ದೇವರ ಬಹುರೂಪದ ಜ್ಞಾನವು ಅಶರೀರ ಶಕ್ತಿಗಳ ಅಧಿಕಾರಿಗಳಿಗೂ ಅಧಿಪತಿಗಳಿಗೂ ಈಗಿನ ಕಾಲದಲ್ಲಿ ತಿಳಿಯಬೇಕೆಂಬುದೇ ಅವರ ಉದ್ದೇಶವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹು ಪ್ರಕಾರದ ದೇವರ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶ.