Ephesians 3:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ದೇವರ ಪ್ರೀತಿಯಲ್ಲಿ ನೆಲೆಯಾಗಿ ನಿಂತು, ದೇವಜನರೆಲ್ಲರೊಂದಿಗೆ ಅದರ ಅಗಲ, ಉದ್ದ, ಎತ್ತರ, ಆಳ ಎಷ್ಟೆಂಬುದನ್ನು ಗ್ರಹಿಸುವುದಕ್ಕೆ ಶಕ್ತರಾಗುವಂತೆಯೂ,
Kannada BSI Bible 2016
ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ದೇವರ ಪ್ರೀತಿಯಲ್ಲಿ ನೆಲೆಗೊಂಡು ನಿಂತು ಅದರ ಅಗಲ ಉದ್ದ ಎತ್ತರ ಆಳ ಎಷ್ಟೆಂಬದನ್ನು ದೇವಜನರೆಲ್ಲರೊಂದಿಗೆ ಗ್ರಹಿಸಲೂ
Kannada Bible (KNCL) BSI 2016
ಹೀಗೆ ದೇವಜನರೆಲ್ಲರೊಡನೆ, ಕ್ರಿಸ್ತಯೇಸುವಿನ ಅಗಾಧ ಪ್ರೀತಿಯ ಉದ್ದ-ಅಗಲ, ಆಳ-ಎತ್ತರ ಎಷ್ಟೆಂಬುದನ್ನು ನೀವು ಗ್ರಹಿಸಿಕೊಳ್ಳುವಂತಾಗಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮತ್ತು ತಿಳುವಳಿಕೆಗೆ ಅಪಾರವಾದ ಕ್ರಿಸ್ತನ ಪ್ರೀತಿಯನ್ನು ನೀವು ತಿಳಿದುಕೊಂಡು ದೇವರ ಸರ್ವಸಂಪೂರ್ಣತೆಯಿಂದ ತುಂಬಿದವರಾಗಲಿ ಎಂದು ಅವರನ್ನು ಬೇಡಿಕೊಳ್ಳುತ್ತೇನೆ.