Ephesians 3:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
Kannada BSI Bible 2016
ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಕ್ಕೆ ಮೀರುವ ಕ್ರಿಸ್ತನ ಪ್ರೀತಿಯನ್ನು ತಿಳುಕೊಳ್ಳಲೂ ಪೂರ್ಣಶಕ್ತರಾಗಿದ್ದು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
Kannada Bible (KNCL) BSI 2016
ಹೌದು, ಜ್ಞಾನವನ್ನು ಮೀರಿದ ಈ ಪ್ರೀತಿಯನ್ನು ಅರಿತುಕೊಳ್ಳಲು ಆಸಕ್ತರಾಗಬೇಕು, ದೇವರ ಪರಿಪೂರ್ಣತೆಯಿಂದ ತುಂಬಿದವರಾಗಬೇಕು ಎಂದು ನಾನು ಬೇಡಿಕೊಳ್ಳುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮ್ಮಲ್ಲಿ ಕಾರ್ಯಸಾಧಿಸುವ ತಮ್ಮ ಶಕ್ತಿಯ ಪ್ರಕಾರ ನಾವು ಬೇಡುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಅತ್ಯಧಿಕವಾಗಿಯೇ ಎಲ್ಲವನ್ನೂ ಮಾಡಲು ಶಕ್ತರಾದ ದೇವರಿಗೆ