Ephesians 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
Kannada BSI Bible 2016
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಆತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿ ಮನುಷ್ಯ ಪುತ್ರರಿಗೆ ತಿಳಿಸಲ್ಪಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.
Kannada Bible (KNCL) BSI 2016
ಹಿಂದಿನ ಕಾಲದವರಿಗೆ ಈ ರಹಸ್ಯವನ್ನು ತಿಳಿಸಿರಲಿಲ್ಲ. ಆದರೆ ಈಗ ದೇವರು ಪವಿತ್ರಾತ್ಮರ ಮುಖಾಂತರ ಪೂಜ್ಯಪ್ರೇಷಿತರಿಗೂ ಪ್ರವಾದಿಗಳಿಗೂ ಅದನ್ನು ಪ್ರಕಟಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ರಹಸ್ಯವು ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ದೇವರಾತ್ಮರ ಮೂಲಕ ಈಗ ಪ್ರಕಟಿಸಿದಂತೆ, ಬೇರೆ ತಲೆಮಾರುಗಳಲ್ಲಿದ್ದ ಜನರಿಗೆ ತಿಳಿಸಿರಲಿಲ್ಲ.