Ephesians 3:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಯಾವುದೆಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ದೇವಜನರೊಂದಿಗೆ ಸಹಬಾಧ್ಯರೂ ಒಂದೇ ದೇಹದ ಅಂಗಗಳೂ, ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬುದೇ.
Kannada BSI Bible 2016
ಅದೇನಂದರೆ, ಅನ್ಯಜನರು (ಯೆಹೂದ್ಯರೊಂದಿಗೆ) ಸಹ ಬಾಧ್ಯರೂ ಒಂದೇ ದೇಹದವರೂ ಸುವಾರ್ತೆಯಿಂದ ಕ್ರಿಸ್ತನ ಮೂಲಕ ಆತನ ವಾಗ್ದಾನದಲ್ಲಿ ಪಾಲುಗಾರರೂ ಆಗಿರಬೇಕೆಂ ಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಯಾವದಂದರೆ, ಅನ್ಯಜನರು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹದೊಳಗಣ ಅಂಗಗಳೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆಂಬದೇ.
Kannada Bible (KNCL) BSI 2016
ಶುಭಸಂದೇಶದ ಮೂಲಕ ಅನ್ಯಜನರೂ ಯೇಸುಕ್ರಿಸ್ತರಲ್ಲಿ ದೇವಜನರೊಡನೆ ಸಹಬಾಧ್ಯರು, ಹಕ್ಕುದಾರರು, ಒಂದೇ ಶರೀರದ ಅಂಗಗಳು, ಹಾಗೂ ದೇವರು ಮಾಡಿದ ವಾಗ್ದಾನದಲ್ಲಿ ಪಾಲುಗಾರರು ಇದೇ ಆ ರಹಸ್ಯ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುವಾರ್ತೆಯ ಮೂಲಕ ಯೆಹೂದ್ಯರಲ್ಲದವರೂ ಸಹ ಇಸ್ರಾಯೇಲರೊಂದಿಗೆ ವಾರಸುದಾರರೂ ಒಂದೇ ದೇಹದ ಅವಯವಗಳೂ ಕ್ರಿಸ್ತ ಯೇಸುವಿನಲ್ಲಿ ದೇವರ ವಾಗ್ದಾನದ ಸಹಪಾಲುಗಾರರೂ ಆಗಿರಬೇಕೆಂಬುದೇ ಈ ರಹಸ್ಯ.