Ephesians 3:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತನ್ನ ಶಕ್ತಿಯ ಪ್ರಯೋಗದ ಮೂಲಕ ನನಗೆ ಕೊಡಲ್ಪಟ್ಟ ಆತನ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
Kannada BSI Bible 2016
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಅನುಗ್ರಹಿಸಿದ ಕೃಪಾದಾನಕ್ಕನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತನ್ನ ಶಕ್ತಿಯ ಪ್ರಯೋಗದಲ್ಲಿ ನನಗೆ ಉಚಿತಾರ್ಥವಾಗಿ ಅನುಗ್ರಹಿಸಿದ ಕೆಲಸವನ್ನನುಸರಿಸಿ ನಾನು ಈ ಸುವಾರ್ತೆಗೆ ಸೇವಕನಾದೆನು.
Kannada Bible (KNCL) BSI 2016
ಈ ಶುಭಸಂದೇಶಕ್ಕೆ ದಾಸನನ್ನಾಗಿ ದೇವರು ನನ್ನನ್ನು ನೇಮಿಸಿದ್ದಾರೆ. ತಮ್ಮ ಪ್ರಭಾವಮಯ ಶಕ್ತಿಯಿಂದ ಈ ವಿಶೇಷ ವರವನ್ನು ಉಚಿತವಾಗಿ ನನಗೆ ದಯಪಾಲಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಶಕ್ತಿಯ ಕ್ರಿಯೆಯಿಂದ ನನಗೆ ಕೊಡಲಾದ ಅವರ ದೇವ ಕೃಪಾದಾನಕ್ಕೆ ಅನುಸಾರವಾಗಿ ನಾನು ಈ ಸುವಾರ್ತೆಗೆ ಸೇವಕನಾದೆನು.