Ephesians 3:9 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರಹಸ್ಯವಾಗಿದ್ದ ತನ್ನ ಯೋಜನೆಯನ್ನು ಜನರೆಲ್ಲರಿಗೆ ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಆದಿಯಿಂದಲೂ ಅದು ದೇವರಲ್ಲಿ ಮರೆಯಾಗಿತ್ತು. ಪ್ರತಿಯೊಂದನ್ನೂ ಸೃಷ್ಟಿಸಿದಾತನು ದೇವರೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಗುಪ್ತವಾಗಿದ ಮರ್ಮದ ಯೋಜನೆಯನ್ನು ಎಲ್ಲಾರಿಗೂ ತಿಳಿಸುವಂತಹ ಕೃಪೆಯು ದೇವಜನರೊಳಗೆ ಅತ್ಯಲ್ಪನಾದ ನನಗೆ ಕೊಡಲ್ಪಟ್ಟಿತು.
Kannada BSI Bible 2016
ಸಮಸ್ತ ವನ್ನು ಯೇಸು ಕ್ರಿಸ್ತನಿಂದ ಸೃಷ್ಟಿಸಿದ ದೇವರಲ್ಲಿ ಲೋಕಾದಿ ಯಿಂದ ಮರೆಯಾಗಿದ್ದ ಮರ್ಮದ ಅನ್ಯೋನ್ಯತೆಯು ಎಲ್ಲರಿಗೂ ತೋರುವಂತೆ ಮಾಡುವ ಹಾಗೆಯೂ
Kannada Bible (KNCL) BSI 2016
ಸಮಸ್ತವನ್ನು ಸೃಷ್ಟಿಸಿದ ದೇವರು ಆದಿಯಿಂದಲೂ ಗುಪ್ತವಾಗಿಟ್ಟಿದ್ದ ತಮ್ಮ ಯೋಜನೆಯನ್ನು ಈಡೇರಿಸುವ ವಿಧಾನವನ್ನು ಸರ್ವಜನರಿಗೆ ತಿಳಿಯಪಡಿಸುವುದಕ್ಕಾಗಿ ನನ್ನನ್ನು ಆರಿಸಿಕೊಂಡಿರುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಮಸ್ತವನ್ನೂ ಸೃಷ್ಟಿಸಿದ ದೇವರಲ್ಲಿ ಲೋಕಾದಿಯಿಂದ ಮರೆಯಾಗಿದ್ದ ಕಾರ್ಯಭಾರದ ರಹಸ್ಯವು ಏನೆಂಬುದನ್ನು ಎಲ್ಲರಿಗೂ ಸ್ಪಷ್ಟಪಡಿಸುವುದಕ್ಕಾಗಿಯೂ ಆಗಿರುತ್ತದೆ.