Ephesians 4:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಭೆಯ ಸೇವೆಗೋಸ್ಕರ ದೇವರ ಪರಿಶುದ್ಧ ಜನರನ್ನು ಸಿದ್ಧಪಡಿಸುವುದಕ್ಕಾಗಿ ಆತನು ಅವರನ್ನು ನೇಮಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವೆಲ್ಲರೂ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯತೆಯನ್ನು ಹೊಂದಿ, ಪರಿಪಕ್ವತೆಯನ್ನು ಪಡೆದು, ಕ್ರಿಸ್ತನ ಪರಿಪೂರ್ಣತೆಯ ಮಟ್ಟವನ್ನು ತಲುಪುವ ತನಕ,
Kannada BSI Bible 2016
ಆತನು ಕೆಲವರನ್ನು ಅಪೋಸ್ತರನ್ನಾಗಿಯೂ ಕೆಲವರನ್ನು ಪ್ರವಾದಿಗಳನ್ನಾಗಿಯೂ ಕೆಲವರನ್ನು ಸುವಾರ್ತಿಕರ ನ್ನಾಗಿಯೂ ಕೆಲವರನ್ನು ಸಭಾಪಾಲಕರನ್ನಾಗಿಯೂ ಉಪದೇಶಿಗಳನ್ನಾಗಿಯೂ ಅನುಗ್ರಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಜನರನ್ನು ಯೋಗ್ಯಸ್ಥಿತಿಗೆ ತರುವ ಕೆಲಸಕ್ಕೋಸ್ಕರವೂ ಸಭೆಯ ಸೇವೆಗೋಸ್ಕರವೂ ಕ್ರಿಸ್ತನ ದೇಹವು ಅಭಿವೃದ್ಧಿಯಾಗುವದಕ್ಕೋಸ್ಕರವೂ ಆತನು ಇವರನ್ನು ಅನುಗ್ರಹಿಸಿದನು.
Kannada Bible (KNCL) BSI 2016
ದೇವಜನರನ್ನು ಪರಿಣಿತರನ್ನಾಗಿಸಿ ದೇವರ ಸೇವೆಗೆ ಸಿದ್ಧಗೊಳಿಸಲೆಂದು ಮತ್ತು ಯೇಸುಕ್ರಿಸ್ತರ ದೇಹವಾದ ಧರ್ಮಸಭೆ ಅಭಿವೃದ್ಧಿಹೊಂದಲೆಂದು ಈ ವರಗಳನ್ನು ಅವರಿಗೆ ನೀಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.