Ephesians 4:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವೆಲ್ಲರೂ ಒಂದೇ ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಐಕ್ಯರಾಗುವತನಕ ಈ ಸೇವೆಯು ಮುಂದುವರಿಯಬೇಕು. ನಾವು ಪರಿಪೂರ್ಣರಾಗುವ ತನಕ ಅಂದರೆ ಕ್ರಿಸ್ತನ ಸರ್ವಸಂಪೂರ್ಣತೆಯನ್ನು ಮುಟ್ಟುವತನಕ ಬೆಳೆಯಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಜನರನ್ನು ದೇವರ ಸೇವೆಗೆ ಸಿದ್ಧಗೊಳಿಸುವುದಕ್ಕೂ, ಕ್ರಿಸ್ತನ ದೇಹವೆಂಬ ಸಭೆಯು ಅಭಿವೃದ್ಧಿಯಾಗುವುದಕ್ಕೋಸ್ಕರವೂ ಆತನು ಇವರನ್ನು ನೇಮಿಸಿದನು.
Kannada BSI Bible 2016
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವೆಲ್ಲರು ನಂಬಿಕೆಯಿಂದಲೂ ದೇವಕುಮಾರನ ವಿಷಯವಾದ ಜ್ಞಾನದಿಂದಲೂ ಉಂಟಾಗುವ ಐಕ್ಯವನ್ನು ಹೊಂದಿ ಪ್ರವೀಣತೆಗೆ ಬಂದವರಾಗಿ ಕ್ರಿಸ್ತನ ಪರಿಪೂರ್ಣತೆಯೆಂಬ ಪ್ರಮಾಣವನ್ನು ಮುಟ್ಟುವ ತನಕ
Kannada Bible (KNCL) BSI 2016
ಹೀಗೆ ನಾವೆಲ್ಲರೂ ಒಂದೇ ವಿಶ್ವಾಸದಿಂದಲೂ ದೇವರ ಪುತ್ರನನ್ನು ಕುರಿತ ಜ್ಞಾನದಿಂದಲೂ ಐಕಮತ್ಯವನ್ನು ಮತ್ತು ಪರಿಪಕ್ವತೆಯನ್ನು ಪಡೆಯುತ್ತೇವೆ. ಜ್ಞಾನಾರ್ಜನೆಯನ್ನು ಪಡೆದವರಾಗಿ, ಕ್ರಿಸ್ತಯೇಸುವಿನ ಪರಿಪೂರ್ಣತೆಯ ಮಟ್ಟವನ್ನು ಮುಟ್ಟುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವೆಲ್ಲರೂ ಕ್ರಿಸ್ತನ ಪರಿಪೂರ್ಣತೆಯ ಬೆಳವಣಿಗೆಯಲ್ಲಿ ವಿಶ್ವಾಸದಲ್ಲಿಯೂ ದೇವಪುತ್ರನ ತಿಳುವಳಿಕೆಯಲ್ಲಿ ಒಂದು ಮನಸ್ಸುಳ್ಳವರಾಗಿ ಪರಿಪಕ್ವತೆಯನ್ನು ಹೊಂದುವುದೇ ಆ ಉದ್ದೇಶವಾಗಿತ್ತು.