Ephesians 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವಾದರೊ ಸತ್ಯವನ್ನು ಪ್ರೀತಿಯಿಂದ ಹೇಳಬೇಕು; ಎಲ್ಲಾ ವಿಷಯಗಳಲ್ಲಿಯೂ ಬೆಳೆದು ಕ್ರಿಸ್ತನಂತಾಗಲು ಪ್ರಯತ್ನಿಸಬೇಕು. ಕ್ರಿಸ್ತನು ಶಿರಸ್ಸಾಗಿದ್ದಾನೆ ಮತ್ತು ನಾವು ದೇಹವಾಗಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.
Kannada BSI Bible 2016
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರೀತಿಯಿಂದ ಸತ್ಯವನ್ನನುಸರಿಸುತ್ತಾ ಬೆಳೆದು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ಐಕ್ಯವನ್ನು ಹೊಂದುತ್ತಾ ಬರಬೇಕು.
Kannada Bible (KNCL) BSI 2016
ಬದಲಾಗಿ, ಪ್ರೀತಿಯಿಂದ ಸತ್ಯವನ್ನೇ ನುಡಿಯುತ್ತೇವೆ. ಶಿರಸ್ಸಾದ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ಸರ್ವತೋಮುಖವಾಗಿ ಬೆಳೆಯುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ.