Ephesians 4:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
Kannada BSI Bible 2016
ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲು ಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯಹೊಂದಿ ಪ್ರೀತಿ ಯಿಂದ ತನ್ನಲ್ಲಿ ಐಕ್ಯವಾಗಿದ್ದು ಭಕ್ತಿವೃದ್ಧಿಯನ್ನು ಹೊಂದುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.
Kannada Bible (KNCL) BSI 2016
ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.