Ephesians 4:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಭುವಿಗೋಸ್ಕರ ನಾನು ನಿಮಗೆ ಇದನ್ನು ಹೇಳುತ್ತೇನೆ ಮತ್ತು ಎಚ್ಚರಿಸುತ್ತೇನೆ. ಅವಿಶ್ವಾಸಿಗಳಂತೆ ಇನ್ನು ಮೇಲೆ ಜೀವಿಸದಿರಿ. ಅವರ ಆಲೋಚನೆಗಳು ನಿಷ್ಪ್ರಯೋಜಕವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದ್ದರಿಂದ ನಾನು ಕರ್ತನಲ್ಲಿ ಹೇಳುವುದೇನಂದರೆ ಅನ್ಯಜನರು ನಡೆದುಕೊಳ್ಳುವ ಹಾಗೆ ನೀವು ಇನ್ನು ಮುಂದೆ ನಡೆದುಕೊಳ್ಳಬಾರದು. ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ.
Kannada BSI Bible 2016
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರ ದೆಂದು ಕರ್ತನಲ್ಲಿರುವವನಾಗಿ ನಾನು ನಿಮಗೆ ಖಂಡಿತವಾಗಿ ಹೇಳುತ್ತೇನೆ. ಅವರು ನಿಷ್ಪ್ರಯೋಜನ ವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಅನ್ಯಜನರು ನಡೆದುಕೊಳ್ಳುವ ಪ್ರಕಾರ ನೀವು ಇನ್ನು ಮೇಲೆ ನಡೆದುಕೊಳ್ಳಬಾರದೆಂದು ಕರ್ತನಲ್ಲಿರುವವನಾಗಿ ನಿಮಗೆ ಖಂಡಿತವಾಗಿ ಹೇಳುತ್ತೇನೆ.
Kannada Bible (KNCL) BSI 2016
ಪ್ರಭುವಿನ ಹೆಸರಿನಲ್ಲಿ ನಾನು ನಿಮಗೆ ಒತ್ತಿ ಹೇಳುತ್ತೇನೆ: ಇನ್ನು ಮುಂದೆ ನೀವು ಅನ್ಯಜನರಂತೆ ಜೀವಿಸುವುದನ್ನು ತ್ಯಜಿಸಿರಿ. ಅವರ ಆಲೋಚನೆಗಳು ಹುರುಳಿಲ್ಲದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ, ಯೆಹೂದ್ಯರಲ್ಲದವರು ವ್ಯರ್ಥ ಆಲೋಚನೆಯುಳ್ಳವರಾಗಿ ಬಾಳುವ ರೀತಿಯಲ್ಲಿ ನೀವು ಇನ್ನು ಮೇಲೆ ಬಾಳದಂತೆ, ಕರ್ತನಲ್ಲಿ ನಾನು ನಿಮಗೆ ಸಾಕ್ಷಿಕೊಟ್ಟು ಹೇಳುತ್ತೇನೆ.