Ephesians 4:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅರ್ಥ ಮಾಡಿಕೊಳ್ಳುವುದಿಲ್ಲ. ಅವರು ಕಿವಿಗೊಡದ ಕಾರಣ ಅವರಿಗೆ ಏನೂ ಗೊತ್ತಿಲ್ಲ. ಆದ್ದರಿಂದ ದೇವರು ಕೊಡುವ ಜೀವಿತವನ್ನು ಹೊಂದಿಕೊಳ್ಳಲು ಅವರಿಗೆ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.
Kannada BSI Bible 2016
ಅವರ ಮನಸ್ಸು ಮೊಬ್ಬಾಗಿ ಹೋಗಿದೆ. ಅವರು ತಮ್ಮ ಹೃದಯದ ಕುರುಡುತನದ ನಿಮಿತ್ತದಿಂದಲೂ ತಮ್ಮಲ್ಲಿರುವ ಆಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನಿಷ್ಪ್ರಯೋಜನವಾದ ಬುದ್ಧಿಯುಳ್ಳವರಾಗಿ ನಡೆದುಕೊಳ್ಳುತ್ತಾರೆ; ಅವರ ಮನಸ್ಸು ಮೊಬ್ಬಾಗಿ ಹೋಗಿದೆ, ಅವರು ತಮ್ಮ ಹೃದಯದ ಕಾಠಿಣ್ಯದ ನಿವಿುತ್ತದಿಂದಲೂ ತಮ್ಮಲ್ಲಿರುವ ಅಜ್ಞಾನದ ನಿವಿುತ್ತದಿಂದಲೂ ದೇವರಿಂದಾಗುವ ಜೀವಕ್ಕೆ ಅನ್ಯರಾಗಿದ್ದಾರೆ.
Kannada Bible (KNCL) BSI 2016
ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಮ್ಮ ಹೃದಯ ಕಠಿಣತ್ವದ ಅಜ್ಞಾನದಿಂದ ತಮ್ಮ ಕತ್ತಲು ಕವಿದ ತಿಳುವಳಿಕೆಯಲ್ಲಿ, ದೇವರ ಜೀವದಿಂದ ತಮ್ಮನ್ನು ಪ್ರತ್ಯೇಕಿಸಿಕೊಂಡವರಾಗಿದ್ದಾರೆ.